Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ
ಕರ್ನಾಟಕ

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

Share
1 Min Read
SHARE

newsics.com

ಮಂಗಳೂರು: ಯುವಕನೊಬ್ಬ ಅನುಚಿತವಾಗಿ ವರ್ತಿಸಿ ಶ್ರೀಕ್ಷೇತ್ರಕ್ಕೆ ಅಪಚಾರವೆಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ.

ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ ಎನ್ನಲಾಗಿದೆ.

ಅಣ್ಣಪ್ಪ ಪಂಜುರ್ಲಿ ಗುಡಿಯ ಮುಂದೆ ಹೋಗಿ ಬಾಗಿಲಿಗೆ ಕಾಲಿನಿಂದ ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿ ಹುಚ್ಚಾಟ ಮೆರೆದಿದ್ದು, ಬಳಿಕ ದೈವಸ್ಥಾನದ ಬಳಿ ಇದ್ದ ದೈವದ ಕತ್ತಿಯನ್ನು ಕೈಗೆತ್ತಿಕೊಂಡು ರಾದ್ಧಾಂತ ನಡೆಸಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಮಹಾಪೂಜೆ ವೇಳೆ ದೇವಾಲಯದಲ್ಲಿ ಈ ರೀತಿಯ ದಾಂಧಲೆ ನಡೆಸಿದ್ದಾನೆ.

ಈತ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ಅಣ್ಣಪ್ಪ ಪಂಜುರ್ಲಿಯ ಕತ್ತಿ(ಕಡ್ಸಲೆ) ತೆಗೆದು ದಾಂಧಲೆ ಮಾಡಿದ್ದಾನೆ.

ದೇವಾಲಯದ ಸೆಕ್ಯುರಿಟಿ ಇದ್ದರೂ ಒಳಾಂಗಣಕ್ಕೆ ಬೈಕ್ ತಂದು, ಅಣ್ಣಪ್ಪ ದೈವದ ಗುಡಿಯೊಳಗೆ ನುಗ್ಗಿ ಮಂಟಪದ ಮೇಲೆ ಹತ್ತಿ ದಾಂಧಲೆ ಮಾಡಿದ್ದಾನೆ ಎನ್ನಲಾಗಿದೆ.

ಅಣ್ಣಪ್ಪ ದೈವದ ಕಡ್ಸಲೆ ಮುಟ್ಟಿದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಶುದ್ಧೀಕರಣ ಮಾಡಲಾಗಿದೆ. ಈ ಹಿಂದೆಯೂ ಸುಧಾಕರ ಆಚಾರ್ಯ ಬೇರೆ ಎರಡು ಮೂರು ದೇವಾಲಯಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈತ ದೇವಾಲಯದ ಆವರಣದೊಳಗೆ ಬೈಕ್ ತಂದ ವೇಳೆ ಭಕ್ತರಿಗೂ ಗಾಯಗಳಾಗಿವೆ ಎಂದು ದೇವಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಕದ್ರಿ ಪೊಲೀಸ್ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದು, ಹುಚ್ಚಾಟ ಮೆರೆದ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಂಪಾಟ ಮಾಡಿದ ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದಾನೆ ಎನ್ನಲಾಗಿದೆ.

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

  ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

TAGGED:misbehavior at Kadri shrine: Youth in police custodyRampage
Share This Article
Facebook Twitter Copy Link Print
Previous Article ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
Next Article ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?