newsics.com
ಬೆಂಗಳೂರು: ಚಂದನವನದ ಬಹುನಿರೀಕ್ಷಿತ ಚಿತ್ರ ‘ಉತ್ತರಾಖಾಂಡ’ದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಡಾ. ಶಿವರಾಜ್‌ಕುಮಾರ್ ಅವರು ಚಿತ್ರದಲ್ಲಿ ಮಾಲೀಕನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಜು.12ರಂದು ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ದಿನ ಮುಂಚಿತವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ಇದೊಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್, ಕೆಆರ್‌ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.
ಸಿನಿಮಾದಲ್ಲಿ ಡಾಲಿ ಧನಂಜಯ, ಭಾವನಾ ಮೆನನ್, ಐಶ್ವರ್ಯ ರಾಜೇಶ್, ದಿಗಂತ್ ಸೇರಿ ಹಲವು ಕಲಾವಿದರು ಕಾಣಿಸಿಕೊಂಡಿದ್ದಾರೆ.