newsics. Com
ಬೆಂಗಳೂರು :ವರುಣ ಅಬ್ಬರ ಮುಂದುವರೆದಿದ್ದು, ಇಂದು(ಶುಕ್ರವಾರ) ಸಂಜೆ ಆಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ.
ಶಾಂತಿನಗರ, ಕೆ.ಹೆಚ್ ರಸ್ತೆ, ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ.
ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ.
ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಬೆಂಗಳೂರು ನಗರದ ಹಲವೆಡೆ ಮಳೆ ಆರಂಭವಾಗಿದ್ದು, ದಿಢೀರ್ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಂಜೆ ವೇಳೆಗೆ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಗೆ ಸಿಲುಕಿ ಪರದಾಟ ಅನುಭವಿಸುವಂತಾಗಿದೆ.