newsics.com
ಉತ್ತರ ಕನ್ನಡ : ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ.
ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.ಐಸ್ ಫ್ಯಾಕ್ಟರಿ ಬಳಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೂರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ. ಮನೆಗಳಿಗೂ ನೀರು ನುಗ್ಗಿ, ಮನೆಯಿಂದಾಚೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕಂಗಲಾಗಿರೋ ಜನರು, ನಮ್ಮ ಕಷ್ಟ ಕೇಳರೋ ಯಾರು ಇಲ್ಲ ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ಹೋಗಲು ಜಾಗವಿಲ್ಲದೇ ಡಾಬಾಗೆ ನುಗ್ಗುತ್ತಿದೆ. ಇನ್ನೂ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತವಾಗಿದೆ. ರಸ್ತೆಯಲ್ಲಿ ಮಣ್ಣು ಕುಸಿತು ಸಂಚಾರ ಅಸ್ತವ್ಯಸ್ತಗೊಂಡಿದೆ.