newsics.com
ಬೆಂಗಳೂರು : ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುತ್ತಿದೆ.
ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.