ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ

newsics.com ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಿದ್ದಾರೆ. ನವೀನ್ ಕುಮಾರ್ ಎಂಬುವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ … Continue reading ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ