ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ರಜೆ ಘೋಷಿಸಿವೆ. ಕರಾವಳಿ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಭಾರೀ … Continue reading ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ