Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ: ಡಿಸಿಎಂ ಡಿಕೆಶಿಗೆ ಸಂಕಷ್ಟ
ದೇಶಪ್ರಮುಖ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ: ಡಿಸಿಎಂ ಡಿಕೆಶಿಗೆ ಸಂಕಷ್ಟ

Share
3 Min Read
SHARE

newsics.com

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ‌ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ. ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ತನ್ನ ವಿರುದ್ಧ ಸಿಬಿಐ (CBI) ದಾಖಲಿಸಿರುವ ಅದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು (Disproportionate Assets Case) ರದ್ದುಗೊಳಿಸುವಂತೆ ಶಿವಕುಮಾರ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬೇಲಾ ಎಂ ತ್ರಿವೇದಿ ಮತ್ತು ನ್ಯಾ. ಎಸ್‌ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.

ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ, ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಈಗಾಗಲೇ ರಾಜ್ಯ ಸರ್ಕಾರ ಹಿಂಪಡೆದಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ನಮ್ಮ ಕಕ್ಷಿದಾರರನ್ನು ತನಿಖೆ ನಡೆಸುತ್ತಿದ್ದಾರೆ. ಇಡಿ ಪ್ರಕರಣವನ್ನು ಈಗಾಗಲೇ ರದ್ದು ಮಾಡಿದೆ. ಒಂದೇ ಕೇಸ್ ಅನ್ನು ಎರಡು ಸಂಸ್ಥೆಗಳು ತನಿಖೆ ಮಾಡುತ್ತಿರುವುದು ಸರಿಯಲ್ಲ ಎಂದು ವಾದಿಸಿದರು.

ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ನ್ಯಾ.ಬೇಲಾ ಎಂ ತ್ರಿವೇದಿ, ಸರ್ಕಾರದ ಮಂಜೂರಾತಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡುವುದು ಹೇಗೆ? ಇದು ಕೇಳರಿಯದ ಸಂಗತಿ. ಹೈಕೋರ್ಟ್ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ. ಆದರೆ ನಿಮ್ಮ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ (PC Act) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐ ತನಿಖೆ ಮಾಡಬಹುದು, ನಾವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಕ್ಷಮಿಸಿ ಎಂದು ಅರ್ಜಿ ವಜಾಗೊಳಿಸಿದರು.

ಡಿಕೆ ಶಿವಕುಮಾರ್ ವಿರುದ್ಧ 2020ರ ಅಕ್ಟೋಬರ್ 3 ರಂದು ಎಫ್‌ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ.

ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ.

ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು

ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು.

ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ.

ಸಿಬಿಐ ಕೂಡ ಈ‌ ಸಂಬಂಧ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ.

ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್‌ ಆದೇಶದ ಮೇಲೆ ಡಿಕೆ ಶಿವಕುಮಾರ್‌ ಭವಿಷ್ಯ ನಿಂತಿದೆ.

ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ

ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ

ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

TAGGED:Supreme Court refuses to quash property gain beyond income: Distress for DCM DK
Share This Article
Facebook Twitter Copy Link Print
Previous Article ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ
Next Article ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?