Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್
ಕರ್ನಾಟಕಪ್ರಮುಖ

ಅಂಕೋಲಾ ಬಳಿ ಗುಡ್ಡ ಕುಸಿತ: ಕನಿಷ್ಠ 10 ಮಂದಿ ಸಾವು, ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋದ ಟ್ಯಾಂಕರ್

Share
2 Min Read
SHARE

newsics.com

ಶಿರೂರು (ಉತ್ತರ ಕನ್ನಡ): ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿವೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಈ ನಡುವೆ ಐಆರ್‌ಬಿ ರಸ್ತೆ ನಿರ್ಮಾಣ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನೋಡ ನೋಡುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ಗುಡ್ಡ ಕುಸಿದು ಬಿದ್ದಿತು. ಇಡೀ ನಾಲ್ಕು ಪಥದ ರಸ್ತೆಯೂ ಮಣ್ಣಿನಿಂದ ಮುಚ್ಚಿ ಹೋಗಿದೆ. ಗುಡ್ಡ ಕುಸಿತದ ವೇಳೆ ಕಾರೊಂದು ಹಾದುಹೋಗುತ್ತಿದ್ದು, ಈ ಕಾರಿನಲ್ಲಿ 5 ಮಂದಿ ಇದ್ದರು. ಎಲ್ಲರೂ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ನಡುವೆ ಗಂಗವಳ್ಳಿ ನದಿಯಲ್ಲಿ ಬೃಹತ್ ಟ್ಯಾಂಕರ್ ತೇಲುತ್ತಿರುವುದು ಕಂಡುಬಂದಿದೆ. ಕ್ಯಾಂಟೀನ್ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಗುಡ್ಡ ಕುಸಿತದ ರಭಸಕ್ಕೆ ಗಂಗವಳ್ಳಿ ನದಿಯಲ್ಲಿ ಕೊಚ್ಚಿಹೋಗಿದೆ. ಇದರಿಂದ ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಕೂಡ ಸಾವನ್ನಪ್ಪಿರುವ ಶಂಕೆಗಳು ವ್ಯಕ್ತವಾಗಿವೆ.

ಘಟನೆ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನೌಕಾಪಡೆ ಮತ್ತು ಇತರ ರಕ್ಷಣಾ ಪಡೆಗಳು ಈಗಾಗಲೇ ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ 15 ಕ್ಕೂ ಹೆಚ್ಚು ಮಂದಿ ಸಿಲುಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ರಕ್ಷಣಾ ತಂಡ ಶಾಂತಿ ನಾಯ್ಕ(37) ಎನ್ನುವವರ ಮೃತದೇಹವನ್ನು ಮಣ್ಣಿನಿಂದ ಹೊರಕ್ಕೆ ತೆಗೆದಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದರು.

ಮಣ್ಣಿನಡಿಯಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವ ದುರಂತದಲ್ಲಿ 2 ಗ್ಯಾಸ್ ಟ್ಯಾಂಕರ್ ಕೊಚ್ಚಿಕೊಂಡು ಹೋಗಿವೆ. ಅದರಲ್ಲಿ ಒಂದರಲ್ಲಿ ಅನಿಲ ತುಂಬಿದೆ. ಸ್ಥಳದಲ್ಲಿರುವ ಇನ್ನೊಂದು ಟ್ಯಾಂಕರ್ ನಲ್ಲೂ ಅನಿಲ ತುಂಬಿದೆ.

ಗುಡ್ಡ ಕುಸಿತದ ಸಂದರ್ಭದ ಮೂರು ಟ್ಯಾಂಕರ್ ಚಾಲಕರು, ಟೀ ಅಂಗಡಿಯ ನಾಲ್ವರು ಸೇರಿ ಒಟ್ಟು ಏಳು ಜನ ಕಾಣೆಯಾಗಿರುವ ಬಗ್ಗೆ ಅಂದಾಜಿಸಲಾಗಿದೆ. ಓರ್ವ ಮಹಿಳೆಯ ದೇಹ ತೇಲಿ ಬಂದಿದೆ.

ಸ್ಥಳದಲ್ಲಿ ಎರಡು ಎನ್ ಡಿ ಆರ್ ಎಫ್ ತುಕಡಿಗಳ ಸಹಿತ ಎಸ್ ಡಿಆರ್ ಎಫ್ ತುಕಡಿಗಳನ್ನೂ ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ ಇತ್ಯಾದಿಗಳು ಸ್ಥಳದಲ್ಲಿದ್ದು ಕಾರ್ಯಾಚರಣೆಯಲ್ಲಿ ತೊಡಗಿವೆ.

ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಸದನದಲ್ಲಿ ಮಾಹಿತಿ ನೀಡಿದ್ದಾರೆ.

ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ

ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್‌ಗಾಗಿ BMRCL ಅಧಿಕಾರಿಗಳಿಂದ ಶೋಧ

ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

TAGGED:Landslide near Ankola: At least 10 deadtanker washed away in Gangavalli river
Share This Article
Facebook Twitter Copy Link Print
Previous Article ಘಟಶ್ರಾದ್ಧ ರೂವಾರಿ, ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ
Next Article ರೀಲ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ದೀಪಿಕಾ ದಾಸ್, ವಿಡಿಯೊ ನೋಡಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?