newsics.com
ಧಾರವಾಡ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಮಗುವನ್ನು ನಗರದ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಗೋಪಾಲ ಲಮಾಣಿ ಎಂಬುವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ಮಗು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಇದರಿಂದ ಮಗುವನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.
ಕಾನ್ಸ್ಟೇಬಲ್ ಗೋಪಾಲ ಲಮಾಣಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡದವರು. ಈ ಹಿಂದೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಲಕಿಯೋರ್ವಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಳು.
ಇಟಲಿ ಪ್ರಧಾನಿಯನ್ನು ಕುಳ್ಳಿ ಎಂದ ಪತ್ರಕರ್ತನಿಗೆ ಐದು ಲಕ್ಷ ರೂ. ದಂಡ!
ಗೊಂಡಾ ಬಳಿ ಹಳಿ ತಪ್ಪಿದ ದಿಬ್ರುಗಢ ರೈಲು: ನಾಲ್ವರ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೊ ನೋಡಿ