ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ
newsics.com ಧಾರವಾಡ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಮಗುವನ್ನು ನಗರದ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಗೋಪಾಲ ಲಮಾಣಿ ಎಂಬುವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ. ಮಗು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಇದರಿಂದ ಮಗುವನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ. ಕಾನ್ಸ್ಟೇಬಲ್ ಗೋಪಾಲ ಲಮಾಣಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡದವರು. ಈ ಹಿಂದೆ … Continue reading ಶಂಕಿತ ಡೆಂಗ್ಯೂ ಜ್ವರಕ್ಕೆ ಐದು ತಿಂಗಳ ಮಗು ಬಲಿ
Copy and paste this URL into your WordPress site to embed
Copy and paste this code into your site to embed