newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ದರ್ಶನ್ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಮನೆ ಊಟ, ಹಾಸಿಗೆ ಪಡೆಯಲು ದರ್ಶನ್ ಪ್ರಯತ್ನಿಸುತ್ತಿದ್ದಾರೆ.
ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆ ಇಂದು (ಜುಲೈ 19) ನಡೆದಿದೆ. ‘2022ರಲ್ಲಿ ಜೈಲು ಕೈಪಿಡಿಯಲ್ಲಿ ನಿಯಮ ರೂಪಿಸಲಾಗಿದೆ. ಪ್ಯಾರಾ 295ರಲ್ಲಿ ವಿಚಾರಣಾಧೀನ ಕೈದಿಗೆ ಅವಕಾಶ ಕಲ್ಪಿಸಲಾಗಿದೆ. ಮನೆ ಊಟ, ಹಾಸಿಗೆ, ಊಟದ ಪರಿಕರ, ದಿನಪತ್ರಿಕೆಗೆ ಅವಕಾಶವಿದೆ. ಜೈಲು ಕಾಯ್ದೆಯ ಸೆಕ್ಷನ್ 30ರಲ್ಲಿ ಮನೆ ಊಟಕ್ಕೆ ಯಾವುದೇ ನಿರ್ಬಂಧವಿಲ್ಲ. ಕೈಪಿಡಿಯಲ್ಲಿ ಕೊಲೆ ಆರೋಪಿಗೂ ಇತರೆ ಆರೋಪಿಗೂ ವ್ಯತ್ಯಾಸ ತೋರಲಾಗಿದೆ. ನಿಯಂತ್ರಣಕ್ಕೊಳಪಟ್ಟು ಸವಲತ್ತು ನೀಡಲು ಅವಕಾಶವಿದೆ. ಸಮಯದ ನಿಬಂಧನೆ ವಿಧಿಸಿ ಅವಕಾಶ ನೀಡಬಹುದು’ ಎಂದು ಕೆ.ಎನ್. ಫಣೀಂದ್ರ ವಾದ ಮಂಡಿಸಿದ್ದಾರೆ.
ಈ ಕುರಿತು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ದರ್ಶನ್ ಪರವಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.