newsics.com
2025ರ ಐಪಿಎಲ್ ಹರಾಜಿಗೆ ಸದ್ಯದಲ್ಲಿಯೇ ದಿನಾಂಕ ನಿಗದಿಯಾಗಲಿದ್ದು, ಈ ಮಧ್ಯೆಯೇ ಹಲವು ಚರ್ಚೆಗಳು ಶುರುವಾಗಿವೆ.
ಪ್ರತಿ 3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡವನ್ನು ಸೇರಲಿದ್ದಾರೆ ಎಂಬ ಚರ್ಚೆ ಈಗ ಶುರುವಾಗಿವೆ. ಎಂ.ಎಸ್ ಧೋನಿ ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ ಎಂಬ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್. ಮುಂದಿನ ಆವೃತ್ತಿಗೆ ಸಿಎಸ್‌ಕೆ ತಂಡ ಸೇರಲಿದ್ದಾರೆ ಎನ್ನಲಾಗುತ್ತಿದೆ.
2016ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿನಿಧಿಸುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮುಂದಿನ ವರ್ಷದ ಐಪಿಎಲ್‌ಗೆ ನಡೆಯಲಿರುವ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಫ್ರಾಂಚೈಸಿ ತೊರೆದು ಚೆನ್ನೈ ತಂಡ ಸೇರಲಿದ್ದಾರೆ ಎನ್ನಲಾಗುತ್ತಿದೆ. 2024ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಯಿತು. 2022ರಲ್ಲಿ ಆರಂಭವಾದ ಲಕ್ಷ್ಮೀ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್ ರಾಹುಲ್ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಕೆ.ಎಲ್. ರಾಹುಲ್ ಅವರು ಆರ್ ಸಿಬಿ ತಂಡ ಸೇರಿದರೆ, ಕನ್ನಡಿಗರು ಮತ್ತಷ್ಟು ಸಂತಸ ಪಡುವುದರಲ್ಲಿ ಎರಡು ಮಾತಿಲ್ಲ.