ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

newsics. com ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತರೆಡ್ಡಿ ಮುದ್ನಾಳ (76) ಅನಾರೋಗ್ಯರಿಂದ ಸೋಮವಾರ ನಿಧನರಾದರು. ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2010ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ಯಾದಗಿರಿ ಜಿಲ್ಲೆ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುಟುಂಬದ ಐವರನ್ನು ಕೊಂದು, ಸುಟ್ಟ … Continue reading ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ