newsics.com
ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ನಲ್ಲಿ ನಡೆದಿದೆ.
ಜಯರಾಮರೆಡ್ಡಿ ಚಾಕು ಇರಿದ ಆರೋಪಿ ಎಂದು ತಿಳಿದು ಬಂದಿದೆ. ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.
ಈ ಬಗ್ಗೆ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ, ವಕೀಲೆ ವಿಮಲಾಗೆ ಕೋರ್ಟ್ ಹಾಲ್ 1ರಲ್ಲಿ ಚಾಕು ಇರಿದಿದ್ದಾನೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ.