newsics. com
ನಮಾಜ್ ಎಂಬ ಪದ ಉರ್ದು ಭಾಷೆಯಿಂದ ಬಂದಿರಬಹುದು ಅಂತ ಭಾವಿಸಿರುತ್ತಾರೆ. ಆದ್ರೆ ನಿಮ್ಗೊತ್ತಾ ನಮಾಜ್ ಎಂಬುದು ಸಂಸ್ಕೃತ ಪದ. ಈ ಕುರಿತ ಮಾಹಿತಿಯನ್ನು ಮುಸ್ಲಿಂ ಧರ್ಮ ಗುರುಗಳೊಬ್ಬರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸಂದರ್ಶನವೊಂದರಲ್ಲಿ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಡಾ. ಇಮಾಮ್ ಉಮರ್ ಇಲ್ಯಾಸಿ ಅವರು ನಮಾಜ್ ಎಂಬುದು ಸಂಸ್ಕೃತ ಪದ ಎಂಬ ವಿಚಾರವನ್ನು ಹಂಚಿಕೊಂಡಿದ್ದಾರೆ. ಅವರು ಹೇಳುತ್ತಾರೆ, ನಮಾಜ್ ಎಂಬ ಪದದ ಮೂಲ ಭಾರತದ್ದು, ಅದು ಸಂಸ್ಕೃತ ಪದವಾದ ನಮಃ ದಿಂದ ಬಂದಿದೆ. ಅದರ ಅರ್ಥ ಈಶ್ವರನಿಗೆ ತಲೆ ಬಾಗಿ ನಮಸ್ಕರಿಸುವುದು ಅಂತಾ. ಅರಬ್ ದೇಶದವರಿಗೆ ನಮಾಜ್ ಎಂಬ ಪದದ ಬಗ್ಗೆ ಗೊತ್ತಿಲ್ಲ. ಅವರು ಪ್ರಾರ್ಥನೆಗೆ ಸಲಾಹ್ ಎಂದು ಹೇಳುತ್ತಾರೆ ಎಂಬುದನ್ನು ವಿವರಿಸಿದ್ದಾರೆ.