newsics.com
ಬೆಂಗಳೂರು: ಒಡೆಯರ್ ಎಕ್ಸ್ ಪ್ರೆಸ್ ರೈಲಿಗೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಬೆಂಗಳೂರಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಸುಶಾಂತ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಂದು ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಮೈಸೂರಿಗೆ ರೈಲು ಹೊರಟಿತ್ತು. ರೈಲು ಹೊರಡುತ್ತಿದ್ದಂತೆ ರೈಲಿನಿಂದ ಇಳಿದು ಅದೇ ರೈಲಿಗೆ ಚಕ್ರಕ್ಕೆ ತಲೆಕೊಟ್ಟು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಶರಣಾದ ಸುಶಾಂತ್ ಮೈಸೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸುಶಾಂತ್ ಒಡೆಯರ್ ಎಕ್ಸ್ ಪ್ರೆಸ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಎಂದು ತಿಳಿದು ಬಂದಿದೆ.