newsics. com
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಬಿಲ್ಲುಗಾರಿಕೆಯಲ್ಲಿ ಭಾರತ ವನಿತೆಯರ ತಂಡವು ನೇರವಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಜುಲೈ 25ರಂದು ನಡೆದ ಶ್ರೇಯಾಂಕ ಸುತ್ತಿನಲ್ಲಿ 1983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆಯುವ ಮೂಲಕ ಭಾರತದ ವನಿತೆಯರು ಆರಂಭದಲ್ಲೇ ಉತ್ತಮ ಸಾಧನೆ ಮಾಡಿದ್ದಾರೆ.
ಮಹಿಳೆಯರ ಬಿಲ್ಲುಗಾರಿಕೆ ಶ್ರೇಯಾಂಕ ಸುತ್ತಿನಲ್ಲಿ ದಕ್ಷಿಣ ಕೊರಿಯಾ ತಂಡವು ಒಟ್ಟು 2046 ಅಂಕಗಳೊಂದಿಗೆ ಅಗ್ರಸ್ಥಾನ ಪಡೆಯಿತು. ಚೀನಾ 1996 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ಮೆಕ್ಸಿಕೊ 1986 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಭಾರತ 1983 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆಯಿತು.