newsics.com
ನವದೆಹಲಿ: ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಸಿ.ಎಚ್. ವಿಜಯಶಂಕರ್ ಅವರಿಗೆ ರಾಜ್ಯಪಾಲರ ಹುದ್ದೆ ನೀಡಲಾಗಿದೆ. ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆರು ಹಿರಿಯ ನಾಯಕರನ್ನು ರಾಜ್ಯಪಾಲರನ್ನಾಗಿ ನೇಮಿಸಿದ್ದು, ಕನ್ನಡಿಗ ಸಿ.ಎಚ್.ವಿಜಯಶಂಕರ್ ಅವರಿಗೆ ಅವಕಾಶ ದೊರೆತಿದೆ.
ತ್ರಿಪುರಾದ ಮಾಜಿ ಸಿಎಂ ಜಿಷ್ಣು ದೇವ್ ವರ್ಮಾ, ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಕೇಂದ್ರ ಮಾಜಿ ಸಚಿವ ಸಂತೋಷ್ ಗಂಗ್ವಾರ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿಯಾಗಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನಿಯೋಜಿಸಿ ಆದೇಶ ಹೊರಡಿಸಲಾಗಿದೆ.
ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕೆ ತೀವ್ರ ಚರ್ಚೆಯಲ್ಲಿದ್ದ ಬನ್ವಾರಿಲಾಲ್ ಪುರೋಹಿತ್ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ.
ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿಯನ್ನು ಸಹ ವಹಿಸಲಾಗಿದೆ
ಕಳೆದ ಲೋಕಸಭೆ ಚುನಾವಣೆ ವೇಳೆ ತೆಲಂಗಾಣ ರಾಜ್ಯಪಾಲರಾಗಿದ್ದ ತಮಿಳುಸೆಲ್ವಿ ರಾಜೀನಾಮೆ ನೀಡಿದ್ದರು. ಅಲ್ಲದೇ ಕೆಲವು ರಾಜ್ಯಪಾಲರ ಹುದ್ದೆಗಳು ಖಾಲಿ ಇದ್ದವು. ಹೆಚ್ಚುವರಿಯಾಗಿ ಕೆಲವರು ಕಾರ್ಯಭಾರ ವಹಿಸಿಕೊಂಡಿದ್ದರು.
ಬಿಜೆಪಿಯಲ್ಲಿಯೇ ಹಲವು ವರ್ಷಗಳಿಂದ ಇರುವ ಹಿರಿಯ ನಾಯಕರಿಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ.
ಕೆಲವು ವರ್ಷಗಳಿಂ ರಾಜ್ಯಪಾಲರಾಗಿದ್ದ ಕೆಲವರನ್ನು ಕೈಬಿಡಲಾಗಿದ್ದು, ಮತ್ತೆ ಕೆಲವರ ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗುರುತಿಸಿಕೊಂಡವರು, ಬಿಜೆಪಿಯಲ್ಲಿ ಹಿರಿತನ ಹೊಂದಿರುವವರಿಗೆ ಅವಕಾಶ ನೀಡಲಾಗಿದೆ.
ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ತಂಗಿ ಮೇಲೆಯೇ ಅತ್ಯಾಚಾರವೆಸಗಿ ಹತ್ಯೆಗೈದ ಅಪ್ರಾಪ್ತ!
ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!