newsics.com
ಬೆಂಗಳೂರು : ಮಾಜಿ ಸಚಿವ ಹಾಗೂ ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರ ತಂದೆ ನಿಧನರಾಗಿದ್ದಾರೆ.
ಪುಟ್ಟಮಾದೇಗೌಡ(89) ಇಂದು(ಭಾನುವಾರ) ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಮಾದೇಗೌಡ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ.
ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ.