newsics.com
ದೆಹಲಿಯ ರಾಜೇಂದ್ರ ನಗರದಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್ ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿ ವಿದ್ಯಾರ್ಥಿಗಳು ಸಾವನ್ನಪ್ಪಿದ ದುರಂತ ಘಟನೆಯ ಹಿಂದಿನ ಸತ್ಯವನ್ನು ಪತ್ತೆ ಮಾಡಲು ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.
ಪಶ್ಚಿಮ ದೆಹಲಿಯ ಜನಪ್ರಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ಹಠಾತ್ತನೆ ಪ್ರವೇಶಿಸಿದ ನಂತರ ನಾಲ್ಕು ಗಂಟೆಗಳ ಕಾಲ ಸಿಲುಕಿಕೊಂಡಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜೇಂದ್ರ ನಗರದ ರಾವ್ ಐಎಎಸ್ ಸ್ಟಡಿ ಸರ್ಕಲ್ ನ ನೆಲಮಾಳಿಗೆಯು ಶನಿವಾರ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಶನಿವಾರ ರಾತ್ರಿ 7.19 ಕ್ಕೆ ವಿದ್ಯಾರ್ಥಿಗಳು ನೆಲಮಾಳಿಗೆಯಲ್ಲಿ ಸಿಲುಕಿರುವ ಬಗ್ಗೆ ತಮಗೆ ಕರೆ ಬಂದಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಐದು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.