Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು
ದೇಶ

ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು

Share
2 Min Read
SHARE

newsics.com
ಮುಂಬೈ(ಮಹಾರಾಷ್ಟ್ರ): ಸಿಂಧುದುರ್ಗ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಕಾಡಿನಲ್ಲಿ ಮರಕ್ಕೆ ಸರಪಳಿಯಿಂದ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.

ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೊಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಆಕೆಯ ಬಳಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಜಿಲ್ಲೆಯಿಂದ ಸರಿಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಮಹಿಳೆ ಅಳುತ್ತಿರುವುದು ಸ್ಥಳೀಯ ಕುರಿಗಾಹಿಗಳಿಗೆ ಕೇಳಿಬಂದಿತ್ತು.

ಆಕೆ ಸರಪಳಿ ಸಿಲುಕಿಕೊಂಡು ಸಂಕಷ್ಟದಲ್ಲಿರುವುದನ್ನು ಕಂಡು ಕುರುಬರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು.

ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸಾವಂತವಾಡಿ ಮತ್ತು ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು
ಆಕೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕ್ಷೀಣಿಸಿದ್ದ ಕಾರಣ ಆಕೆಯನ್ನು ನಂತರ ಹೆಚ್ಚಿನ ಆರೈಕೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಯಿತು.

ಆಕೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆಕೆಯ ಬಳಿ ಈ ಹಿಂದಿನ ವೈದ್ಯಕೀಯ ಪ್ರಿಸ್ಕ್ರಿಪ್ಷನ್ ಇದ್ದು, ಅದನ್ನು ಪರಿಶೀಲಿಸಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.
ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಮತ್ತು ಆಕೆಯ ಅವಧಿ ಮುಗಿದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಫೋಟೊಕಾಪಿ ಸೇರಿದಂತೆ ದೊರೆತ ದಾಖಲೆಗಳ ಆಧಾರದ ಮೇಲೆ ಮಹಿಳೆಯನ್ನು ಲಲಿತಾ ಕಯಿ ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಆಕೆಯ ರಾಷ್ಟ್ರೀಯತೆಯನ್ನು ನಿರ್ಧರಿಸಲು ಪೊಲೀಸರು ಈ ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ.

ಮಹಿಳೆಯ ಪ್ರಸ್ತುತ ಆರೋಗ್ಯ ಸ್ಥಿತಿ ಆತಂಕಕಾರಿಯಾಗಿರುವುದರಿಂದ ಪೊಲೀಸರಿಗೆ ಹೇಳಿಕೆ ಪಡೆಯಲು ಕಷ್ಟಸಾಧ್ಯವಾಗಿದೆ. ಮಹಿಳೆಯು ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮತ್ತು ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ಆಕೆ ತೀರಾ ದುರ್ಬಲಳಾಗಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆಯನ್ನು ಆ ಮರಕ್ಕೆ ಎಷ್ಟು ಸಮಯದಿಂದ ಕಟ್ಟಿ ಹಾಕಿದ್ದರೋ ಗೊತ್ತಿಲ್ಲ. ತಮಿಳುನಾಡು ಮೂಲದ ಆಕೆಯ ಪತಿ ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ತಮಿಳುನಾಡು, ಗೋವಾ ಮತ್ತು ಇತರ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು-ಮಂಗಳೂರು ನಡುವೆ 14 ರೈಲು ರದ್ದು

ಬಾತ್‌ರೂಂನಲ್ಲಿ ಬಟ್ಟೆ ಕಳಚುವ ವಿಡಿಯೋದ ಅಸಲಿಯತ್ತು ಬಿಚ್ಚಿಟ್ಟ ನಟಿ!

ಅಂಜೂರ ಹಣ್ಣು ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

TAGGED:Rescue of chained woman in forest: Police investigate
Share This Article
Facebook Twitter Copy Link Print
Previous Article ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ
Next Article ರಸ್ತೆಯಲ್ಲೇ ಬೆತ್ತಲೆಯಾಗಿ ಜಗಳವಾಡಿದ ದಂಪತಿ! ವಿಡಿಯೋ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?