newsics.com
ಬೆಂಗಳೂರು: ಆಗಸ್ಟ್ 3ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆಗಸ್ಟ್ 3 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಎರಡು ದಿನಗಳ ಕಾಲ ಗುಡುಗು ಮಿಂಚುಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಭಾಗದಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಭಾಗದಲ್ಲೂ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್ ಗರ್ಲ್ಫ್ರೆಂಡ್
VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ