ಶಿಮ್ಲಾದಲ್ಲಿ ಮೇಘಸ್ಫೋಟ: 20 ಮಂದಿ ನಾಪತ್ತೆ

newsics.com ದೇಶಾದ್ಯಂತ ಭಾರಿ ಮಳೆಯಾಗುತ್ತಿದೆ, ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಲ್ಲಿ ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ. ಸದ್ಯ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 20 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. … Continue reading ಶಿಮ್ಲಾದಲ್ಲಿ ಮೇಘಸ್ಫೋಟ: 20 ಮಂದಿ ನಾಪತ್ತೆ