ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ

newsics.com ಬೆಂಗಳೂರು: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗುರುವಾರ (ಆಗಸ್ಟ್ 1) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ, ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಮೂಲಕ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ … Continue reading ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ