newsics.com
ಬೆಂಗಳೂರು/ ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಸಂಬಂಧ ದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣ ಉಲ್ಲೇಖಿಸಿ ಕಾನೂನು ತಜ್ಞರು ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎಂದು ಮಾಹಿತಿ ದೊರೆತಿದ್ದು, ಈ ಪ್ರಕರಣದಲ್ಲಿ ರಾಜ್ಯಪಾಲರು ಯಾವ ರೀತಿಯಾಗಿ ಮಧ್ಯಪ್ರವೇಶ ಮಾಡಬಹುದು ಎಂಬುದರ ಬಗ್ಗೆ ಕಾನೂನು ತಜ್ಞರ ತಂಡವು ರಾಜ್ಯಪಾಲರಿಗೆ ಹಲವು ನಿದರ್ಶನಗಳನ್ನು ನೀಡಿದೆ ಎಂದುಮೂಲಗೋಉ ತಿಳಿಸುವೆ.
ಅಲ್ಲದೇ ಸಂಭವನೀಯ ಪರಿಸ್ಥಿತಿಗೆ ಸಿದ್ಧಪಡಿಸಲು ಸಂಬಂಧಿಸಿದ ಕಾನೂನು ನಿಬಂಧನೆಗಳನ್ನು ಕೂಡ ತಕ್ಞರ ತಂಡ ಪರಿಶೀಲಿಸುತ್ತಿದೆ ಎನ್ನಲಾಗಿದೆ.
ಮುಡಾ ಭೂ ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ರಾಜ್ಯಪಾಲರ ಕಚೇರಿ ಸ್ವೀಕರಿಸಿದೆ. ರಾಜ್ಯಪಾಲ ತಾವರಚಂದ್ ಗೆಹಲೋತ್ ಅವರು, ಈಗಾಗಲೇ ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈನದಲ್ಲಿರುವ ಅಧಿಕಾರಿಗಳು ಮತ್ತು ಏಜೆನ್ಸಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಸಿಎಂ ಅವರ ವಿರುದ್ಧವೂ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಮನವಿ ಮಾಡಿದ್ದಾರೆ.
ಈ ಮಧ್ಯೆ, ರಾಜ್ಯಪಾಲರು ತನಿಖೆಗೆ ಅನುಕತಿ ನೀಡಿದರೆ ಇದನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಲು ಸಿದ್ದರಾಮಯ್ಯ ಅವರು ಗುರುವಾರದ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಡಿ-ನೋಟಿಫಿಕೇಷನ್ ಪ್ರಕರಣದಲ್ಲಿ ಅಂದಿನ ರಾಜ್ಯಪಾಲ ದಿವಂಗತ ಹಂಸರಾಜ್ ಭಾರದ್ವಾಜ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇದರಿಂದಾಗಿ ಬಿಎಸ್‌ವೈ ವಿಚಾರಣೆ ಎದುರಿಸಬೇಕಾಯಿತು.
ಕುರುಡುಮಲೆ ದೇಗುಲಕ್ಕೆ ನುಗ್ಗಿದ ಮಳೆ ನೀರು: ಹುಂಡಿಗೆ ಹಾಕಿದ್ದ ಕಾಣಿಕೆ ಹಣ ನೀರುಪಾಲು