newsics.com
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನ ಶೂಟಿಂಗ್ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಕೂದಲೆಳೆ ಅಂತರದಲ್ಲಿ ಗೆಲುವು ಸಿಗದೆ ಪದಕ ಕೈತಪ್ಪಿದೆ.
ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು.
ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್ ಸುತ್ತಿನಲ್ಲಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದರೊಂದಿಗೆ ಮೂರನೇ ಪದಕ ಗೆಲ್ಲುವ ಅವರ ಕನಸು ನುಚ್ಚು ನೂರಾಯಿತು.
ಫೈನಲ್ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಕೈಚೆಲ್ಲಿಕೊಂಡರು.
ಯಾದಗಿರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಠಾತ್ ಸಾವು: ಶಾಸಕರೇ ಕಾರಣ ಎಂದ ಸಾರ್ವಜನಿಕರು, ಆಂಬುಲೆನ್ಸ್ ತಡೆದು ಆಕ್ರೋಶ