newsics.com
ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರೆಲ್ಲ 10 ರಿಂದ 15 ವರ್ಷದೊಳಗಿನ ಮಕ್ಕಳು ಎಂದು ತಿಳಿದುಬಂದಿದೆ. ದುರಂತಕ್ಕೆ ಮುಖ್ಯಮಂತ್ರಿ ಮೋಹನ್ ಯಾದವ್ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡೋದಾಗಿ ಘೋಷಣೆ ಮಾಡಿದ್ದಾರೆ. ವರದಿಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ದೇವಾಲಯದ ಗೋಡೆ ನೀರಲ್ಲಿ ನೆನೆದು ನಿಂತಿತ್ತು ಎನ್ನಲಾಗಿದೆ.
ಶಹಪುರದ ಹರ್ದುಲ್ ಬಾಬಾ ಟೆಂಪಲ್ ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಳು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.