newsics.com
ಪತ್ನಿಗೆ ಪೋರ್ನ್ ವಿಡಿಯೋ ತೋರಿಸಿ ಆಫ್ರಿಕಾ ಪುರುಷನ ಜತೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ ವಿಚಿತ್ರ ಘಟನೆಯೊಂದು ಬಹಿರಂಗವಾಗಿದೆ.
ಉತ್ತರ ಪ್ರದೇಶದ ಲಖನೌ ಮೂಲದ ಪತ್ನಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿದ್ದಾಳೆ.
ಪತಿ ಹಾಗೂ ಪತ್ನಿ ಚೀನಾದಲ್ಲಿರುವಾಗ ಈ ಘಟನೆ ನಡೆದಿದೆ. ಪತ್ನಿಗೆ ಪ್ರತಿ ದಿನ ಥಳಿಸುತ್ತಿದ್ದ ಪತಿ, ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಬಳಿಕ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪತಿಯ ಪರಿಚಿತ ಆಫ್ರಿಕಾ ಪುರುಷನ ಜತೆ ಸೆಕ್ಸ್ ಮಾಡುವಂತೆ ಬೆದರಿಕೆ ಹಾಕುತ್ತಿದ್ದ ಎಂದು ಲಖನೌದ ನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಭಾರತೀಯ ರಾಯಭಾರ ಕಚೇರಿ ನೆರವಿನಿಂದ ಭಾರತಕ್ಕೆ ಮರಳಿದ್ದೇನೆ ಎಂದು ಮಹಿಳೆ ಹೇಳಿದ್ದಾಳೆ.
ಲಖನೌದಲ್ಲಿರುವ ತವರಿಗೆ ಆಗಮಿಸಿದ ಪತ್ನಿ ದೂರು ದಾಖಲಿಸಿ ನ್ಯಾಯ ಕೊಡಿಸುವಂತೆ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾಳೆ.
ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ