newsics.com
ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವಾಗಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಮ್ಮನಗೌಡ ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಸಿಸಿಬಿಗೆ ವರ್ಗವಾಗಿದ್ದರು.
ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರ ಜಾರಿ: ಹಿಮಂತ ಬಿಸ್ವಾ ಶರ್ಮಾ
ಬೆಂಗಳೂರಲ್ಲಿ ಹೆಚ್ಚುತ್ತಿದೆ ಚರ್ಮ ಕಾಯಿಲೆ, ಮಕ್ಕಳಲ್ಲೇ ಅಧಿಕ ಹರಡುವಿಕೆ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ