newsics.com
ಇಂಗ್ಲೆಂಡ್ : ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ಮನ್ ಗ್ರಹಾಮ್ ಥೊರ್ಪ್ ನಿಧನರಾಗಿದ್ದಾರೆ.
ನಾಲ್ಕು ದಿನಗಳ ಹಿಂದಷ್ಟೇ ಅಂದರೆ ಆಗಸ್ಟ್ 01 ರಂದು ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ. ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ತಮ್ಮ 55ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ಗಳಾದ ತೆಂಡೂಲ್ಕರ್, ಸೆಹ್ವಾಗ್ ಅವರಂತಹ ಆಟಗಾರರು ಆಡುತ್ತಿದ್ದ ಸಮಯದಲ್ಲಿ ಥೋರ್ಪ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರು.
100 ಟೆಸ್ಟ್ ಪಂದ್ಯಗಳನ್ನು ಆಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳಲ್ಲಿ ಥೋರ್ಪ್ ಕೂಡ ಒಬ್ಬರು. ಅವರ ನಿಧನದ ಸುದ್ದಿ ತಿಳಿದು ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಅವರು ಭಾರತದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.