Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೂಕುಸಿತ ಹಿನ್ನೆಲೆ: ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಿದ ಸರ್ಕಾರ, ಇಂದಿನಿಂದಲೇ ಕಾರ್ಯಾಚರಣೆ
ಕರ್ನಾಟಕಪ್ರಮುಖ

ಭೂಕುಸಿತ ಹಿನ್ನೆಲೆ: ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಿದ ಸರ್ಕಾರ, ಇಂದಿನಿಂದಲೇ ಕಾರ್ಯಾಚರಣೆ

Share
2 Min Read
SHARE

newsics.com

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಈಶ್ವರ ಬಿ. ಖಂಡ್ರೆ ಘೋಷಿಸಿದ್ದಾರೆ.

ಮಾಧ್ಯ‌ಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ಸೋಮವಾರದಿಂದಲೇ (ಆ.5) ಪಶ್ಚಿಮ ಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸಚಿವ ಈಶ್ವರ ಖಂಡ್ರೆ ಸೂಚನೆಗಳೇನು?:

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಅವಕಾಶ ಮಾಡಿಕೊಡಲಾಗಿದೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಲಾಗಿದೆ.

ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ.

ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ.

ಡಿವೋರ್ಸ್ ಆದ ಹೆಂಡತಿಯನ್ನೇ ಗಂಡ ಮತ್ತೆ ಮದುವೆ ಆಗಬಹುದಾ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಸೌತ್ ಫಿಲ್ಮ್ ಫೇರ್ ಅವಾರ್ಡ್ಸ್ 2024: ಕನ್ನಡದ ಯಾವ್ಯಾವ ಸಿನಿಮಾಗೆ ಯಾವ್ಯಾವ ಪ್ರಶಸ್ತಿ ಬಂತು?

ಪ್ರಯಾಣಿಕರ ಸೇಫ್ಟಿಗೆ ಮತ್ತೊಂದು ಹೆಜ್ಜೆ ಇಟ್ಟ ನಮ್ಮ‌ ಮೆಟ್ರೋ: ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ ನಿರ್ಮಾಣ ಯೋಜನೆ

ಹೆಣ್ಣು ಮಕ್ಕಳ ಲೈಂಗಿಕ ಆಕರ್ಷಣೆ ಹತ್ತಿಕ್ಕಲು ಏನ್ ಮಾಡ್ತಾರೆ ಗೊತ್ತಾ?

ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?

TAGGED:Landslide Background: The government has formed a task force to clear the forest encroachment of the Western Ghatswhich is operational from today
Share This Article
Facebook Twitter Copy Link Print
Previous Article ಸೀರೆಯುಟ್ಟು ಪೋಸ್ ಕೊಟ್ಟ ಭೂಮಿ ಶೆಟ್ಟಿ; ಹೊಸ ಲುಕ್‌ಗೆ ಫ್ಯಾನ್ಸ್ ಆದ್ರು ಫುಲ್ ಫಿದಾ
Next Article ಶುಭೋದಯ 05-08-2024 ಸೋಮವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಪ್ರಥಮ, ವರ್ಷ ಋತು ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?