newsics.com
ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ಶೀಘ್ರ ಜಾರಿಗೆ ತರಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರಲು ನಮ್ಮ ಸರ್ಕಾರ ಚಿಂತಿಸಿದೆ ಎಂದು ಹೇಳಿದ್ದಾರೆ. ಆ ಮೂಲಕ ಲವ್ ಜಿಹಾದ್ ವಿರುದ್ಧ ಉತ್ತರ ಪ್ರದೇಶ ಬಳಿಕ ಇದೀಗ ಅಸ್ಸಾಂ ಸರ್ಕಾರ ಕಾನೂನು ತರಲು ಮುಂದಾಗಿದೆ.
ಬಹುತೇಕ ಬಿಜೆಪಿ ಆಡಳಿತದಲ್ಲಿ ರಾಜ್ಯಗಳಲ್ಲಿ ಬಲವಂತದ ಮತಾಂತರದ ವಿರುದ್ಧ ಕಾನೂನುಗಳಿದ್ದರೂ, ಶಿಕ್ಷೆಯ ನಿಬಂಧನೆಗಳನ್ನು ಇನ್ನಷ್ಟು ಕಠಿಣಗೊಳಿಸಲು ಯೋಜನೆಗಳು ಜಾರಿಯಲ್ಲಿವೆ.