newsics.com
ವಿಶಾಖಪಟ್ಟಣಂ: ನಿಂತಿದ್ದ ರೈಲಿನ ಬೋಗಿಗಳು ಬೆಂಕಿಗೆ ಧಗಧಗಿಸಿದ ಘಟನೆ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ.
ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ರೈಲಿನ ಮೂರು ಹವಾನಿಯಂತ್ರಿತ ಬೋಗಿಗಳು ಧಗಧಗಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದೆ. ಈ ವೇಳೆ ಪ್ರಯಾಣಿಕರೆಲ್ಲ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.