newsics.com
ಹಾಸ್ಟೆಲ್ ನಲ್ಲಿ ವಿಷಪೂರಿತ ಆಹಾರ ಸೇವಿಸಿದ 80 ಮಂದಿ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ಜಿಲ್ಲೆಯ ಮೆಹರೂನಾ ಗ್ರಾಮದ ಪಂಡಿತ್ ದೀನದಯಾಳ್ ಉಪಾಧ್ಯಾಯ ಆಶ್ರಮದಲ್ಲಿ 80 ಮಕ್ಕಳು ಹೊಟ್ಟೆನೋವಿನ ದೂರು ನೀಡಿದ್ದಾರೆ. ಮಕ್ಕಳು ಊಟ ಮಾಡಿದ ನಂತರ ಈ ಘಟನೆ ನಡೆದಿದೆ ಎನ್ನಲಾಗುತ್ತದೆ.
ಇನ್ನು ಊಟದ ಮಾದರಿಗಳನ್ನು ಪರೀಕ್ಷೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಮತ್ತು ಫಲಿತಾಂಶಗಳ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರಿ ಆಶ್ರಮ ಶಾಲೆಯಲ್ಲಿ ಆರರಿಂದ 12ನೇ ತರಗತಿವರೆಗೆ 326 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ರಾತ್ರಿ ಊಟದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ, ಹೊಟ್ಟೆ ನೋವು, ತಲೆಸುತ್ತು, ನೆಗಡಿ ಕಾಣಿಸಿಕೊಂಡಿತು.