newsics.com
ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದ್ದು, BMTC ಎಲೆಕ್ಟ್ರಿಕ್ ಬಸ್ ವೊಂದು ಬೆಂಕಿಗಾಹುತಿಯಾಗಿದೆ.
ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾಗಿದೆ.
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.
ಸರ್ವೀಸ್ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹೋಗುತ್ತಿದ್ದ ವೇಳೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಇಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ವೇಳೆಗೆ ಬಸ್ ಪೂರ್ಣ ಸುಟ್ಟಿತ್ತು.
ನಂತರ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ಏಕಾಏಕಿ 2 ಅಡಿ ಉದ್ಧದ ನೀರಿನಲ್ಲಿ ಬಸ್ ಚಲಾಯಿಸಿದ್ದರಿಂದ ಅದರ ಎಲೆಕ್ಟ್ರಾನಿಕ್ ಯಂತ್ರಗಳಿಗೆ ನೀರು ನುಗ್ಗಿದ್ದು ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಬಸ್‌ಗೆ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
https://x.com/TheSouthfirst/status/1820704790248149165?t=8gJgJZPWS8GHBMsL73VGlw&s=19
ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್; ಎಷ್ಟು ದುಬಾರಿಯಾಗಲಿದೆ ಬಡವರ ಮದ್ಯ?