newsics.com
ನವದೆಹಲಿ: ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್, ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಮುಹಮ್ಮದ್ ಯೂನಸ್ ಅವರನ್ನು ನೇಮಿಸಿದರು.