Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಂಗ್ಲಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಯೂನಸ್ ನೇಮಕ!
ಪ್ರಮುಖವಿದೇಶವೈರಲ್

ಬಾಂಗ್ಲಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಯೂನಸ್ ನೇಮಕ!

Share
1 Min Read
SHARE

newsics.com
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಾಂಗ್ಲಾದೇಶದಲ್ಲಿ ಇದೀಗ ಮೀಸಲು ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ 5 ಬಾರಿಯ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದಾರೆ.
ಈ ಮೊದಲು ಹಸೀನಾ ಯಾರನ್ನು ರಕ್ತದಾಹಿ ಎಂದು ಕರೆದಿದ್ದರೋ ಅದೇ ಯೂನಸ್ ಗೆ ಬಾಂಗ್ಲಾ ಸಾರಥ್ಯ ನೀಡಬೇಕೆಂಬ ಕೂಗು ಕೇಳಿಬಂದಿದೆ. ಮೊಹಮ್ಮದ್‌ ಯೂನುಸ್‌ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದವರು.

ಬಾಂಗ್ಲಾದೇಶದ ಮೀಸಲು ನಿಯಮವನ್ನು ವಿರೋಧಿಸಿ ಮತ್ತು ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ಮುಂದುವರಿದಿದ್ದು, 56 ಜನರು ಮೃತಪಟ್ಟಿದ್ದಾರೆ. ಇದರಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.

ಇದೇ ಪ್ರತಿಭಟನೆಯ ನಾಯಕರು ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಮೊಹಮದ್ ಯೂನಸ್ ಅವರಿಗೆ ಮನವಿ ಮಾಡಿಕೊಳ್ಳುತ್ತಿದೆ. ಅದಕ್ಕೆ ಯೂನಸ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಯೂನಸ್ ಅವರ ಸೇವೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿ 2006ರಲ್ಲಿ ನೋಬೆಲ್ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.

ಆದಿವಾಸಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಕಡುಬಡವರಿಗೆ ಬದುಕು ಕಟ್ಟಿಕೊಳ್ಳಲು ಅತ್ಯಂತ ಕಡಿಮೆ ಬಡ್ಡಿ ದರ ಅಥವಾ ಬಡ್ಡಿ ರಹಿತ ಸಾಲ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ನೆರವು ನೀಡುವ ಮೂಲಕ ಬಡವರಲ್ಲಿ ಬಡವರ ಪಾಲಿಗೆ ಬ್ಯಾಂಕರ್ ಎಂದೇ 84 ವರ್ಷದ ಯೂನಸ್ ಖ್ಯಾತಿ ಪಡೆದಿದ್ದಾರೆ.

TAGGED:Mohammad Yunus will lead Bangladesh as interim Prime Minister
Share This Article
Facebook Twitter Copy Link Print
Previous Article ಕುಸಿದ ಕೋಡಿಭಾಗ್ ಸೇತುವೆ: ಲಾರಿ‌ ಕಾಳಿ ನದಿ ಪಾಲು, ಚಾಲಕನ ರಕ್ಷಣೆ, ಕಾರ್ಯಾಚರಣೆ ಮುಂದುವರಿಕೆ
Next Article ದಿನ ಭವಿಷ್ಯ 07-08-2024 ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?