newsics.com
ಬೆಂಗಳೂರು: ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಬಳಿ ಹಲವು ಬಾರಿ ಕುಸಿದಿದ್ದ ಗುಡ್ಡದ ಮಣ್ಣನ್ನು ಸದ್ಯ ಅಧಿಕಾರಿಗಳು ತೆರವು ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ಘಾಟ್‌ನ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಭಾರೀ ಪ್ರಮಾಣದ ಭೂ ಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಹಲವು ವಾಹನಗಳು ಸಿಕ್ಕಿ ಹಾಕಿಕೊಂಡಿದ್ದವು. ಮಣ್ಣು ಕುಸಿತದಿಂದ ಟಿಪ್ಪರ್ ಮತ್ತು ಟ್ಯಾಂಕರ್ ಪಲ್ಟಿಯಾದರೆ, ಎರಡು ಕಾರು, ಒಂದು ಟ್ಯಾಂಕರ್, ಒಂದು ಟಿಪ್ಪರ್ ಸೇರಿ ಕೆಲ ವಾಹನ ವಾಹನಗಳು ಜಖಂ ಆಗಿದ್ದವು. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದರು. ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿತ್ತು.
ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ವಾಹನಗಳಿಗೂ ಸಂಚಾರಕ್ಕೆ ಅವಕಾಶವನ್ನು ಆರಂಭಿಸಲಾಗಿದೆ. ಮಳೆ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ದಿನದ 24 ಗಂಟೆಯೂ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಒದಗಿಸಿದೆ.
ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿಯ ತಂಡ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ” ಎಂದು ಮಾಹಿತಿ ನೀಡಿದ್ದಾರೆ.