newsics.com
ನವದೆಹಲಿ: ಗುರುವಾರವೂ (ಆ.8) ಚಿನ್ನ, ಬೆಳ್ಳಿ ಬೆಲೆ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಇವತ್ತು ಒಂದು ಗ್ರಾಮ್‌ಗೆ 40 ರೂ.ನಷ್ಟು ಕಡಿಮೆ ಆಗಿದೆ.
ಒಂದು ಗ್ರಾಮ್ ಆಭರಣ ಚಿನ್ನದ (22 ಕ್ಯಾರಟ್) ಬೆಲೆ ಇವತ್ತು 6,350 ರೂ ಇದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿ ಎಲ್ಲೆಡೆ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ ಇಳಿಕೆ ಆಗಿದೆ.
ಕಳೆದ ಕೆಲ ವಾರಗಳ ಹಿಂದೆ ಅಸಹಜವಾಗಿ ಹಿಗ್ಗಿಹೋಗಿದ್ದ ಚಿನಿವಾರ ಪೇಟೆ ಈಗ ಪ್ರೈಸ್ ಕರೆಕ್ಷನ್ ಹಂತಕ್ಕೆ ಹೋದಂತಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 63,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,100 ರುಪಾಯಿಯಲ್ಲಿ
22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 63,500 ರೂ., 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 69,270 ರೂ., ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ.
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿರ್ಧಾರ ಪ್ರಕಟ