newsics.com
ಹರಿಯಾಣ: ಹರಿಯಾಣದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಆಗಸ್ಟ್ 15ರಿಂದ ಗುಡ್ ಮಾರ್ನಿಂಗ್ ಎಂದು ಬೆಳಗ್ಗೆ ಶುಭ ಕೋರುವ ಬದಲು ಜೈ ಹಿಂದ್ ಎಂದು ಹೇಳಲು ಸೂಚಿಸಲಾಗಿದೆ.
ಸಶಸ್ತ್ರ ಪಡೆಗಳು, ಅರೆಸೇನಾ ಪಡೆಗಳು ಮತ್ತು ಪೊಲೀಸ್ ಪಡೆಗಳ ಸೇವೆಗಳನ್ನು ಶಿಸ್ತುಬದ್ಧವೆಂದು ಗುರುತಿಸುವ ಮೂಲಕ ಜೈ ಹಿಂದ್ ಅನ್ನು ಶುಭಾಶಯವಾಗಿ ಜಾರಿಗೊಳಿಸಲಾಗಿದೆ.
ಸಾಂಸ್ಕೃತಿಕ ಪರಂಪರೆ ಮತ್ತು ರಾಷ್ಟ್ರೀಯ ಸಂಪ್ರದಾಯಗಳಿಗೆ ಗೌರವವನ್ನು ಉತ್ತೇಜಿಸುತ್ತದೆ ಹರಿಯಾಣ ಸರ್ಕಾರವು ಆರಂಭಿಸಿರುವ ಈ ಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಭಾವನೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಶಾಲಾ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆಯಲ್ಲಿ ತಿಳಿಸಿದೆ.
ಶಾಲಾ ಶಿಕ್ಷಣ ನಿರ್ದೇಶನಾಲಯವು ಎಲ್ಲಾ ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ಬ್ಲಾಕ್ ಶಿಕ್ಷಣಾಧಿಕಾರಿಗಳು, ಬ್ಲಾಕ್ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರಿಗೆ ಸುತ್ತೋಲೆಯನ್ನು ಕಳುಹಿಸಿದೆ.