Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ನೂ ಬಗೆಹರಿಯದ ಕೋಲಾರ ನವಜೋಡಿಯ ಸಾವಿನ ರಹಸ್ಯ, ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗ
ಕರ್ನಾಟಕಪ್ರಮುಖ

ಇನ್ನೂ ಬಗೆಹರಿಯದ ಕೋಲಾರ ನವಜೋಡಿಯ ಸಾವಿನ ರಹಸ್ಯ, ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಮಾಹಿತಿ ಬಹಿರಂಗ

Share
2 Min Read
SHARE

newsics.com

ಕೋಲಾರ: ಪರಸ್ಪರ ಪ್ರೀತಿಸಿ ಕಷ್ಟಪಟ್ಟು ಹಸೆಮಣೆಯೇರಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ ಸೇರಿರುವ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದೆ.

ಆದರೆ, ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಇದು ಕೊಲೆಯೇ, ಆತ್ಮಹತ್ಯೆಯೇ ಎಂಉದೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಸಿಕ್ಕ ಬಳಿಕವೂ ಪೊಲೀಸರಿಗೆ ಘಟನೆಯ ಚಿತ್ರಣ ಸ್ಪಷ್ಟವಾಗಿಲ್ಲ. ಹೀಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಈ ಜೋಡಿಯ ಸಾವಿನ ವಿಚಾರವಾಗಿ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆ ಈ ಕೊಲೆಯಲ್ಲಿ ಮೂರನೇ ವ್ಯಕ್ತಿ ಇರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಅಂಶಗಳು ಬಯಲಾಗಿವೆ. ಸಾವಿಗೀಡಾದ ನವೀನ್ ಜನ ಸೇನೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ನವೀನ್ ಮೃತಪಟ್ಟಿದ್ದಾರೆ.

ಮದುವೆ ದಿನ ಸಂಜೆ ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡ ದಂಪತಿ ಕೆಲವೇ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಲಿಖಿತಾಶ್ರೀ ಕೆಜಿಎಫ್ ಆಸ್ಪತ್ರೆಯಲ್ಲಿ ಮೊನ್ನೆ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಪ್ರಾಣಬಿಟ್ಟಿದ್ದಾರೆ.

ಈ ಘಟನೆಯಲ್ಲಿ ದಂಪತಿ ಬಾಳು ಅಂತ್ಯವಾಗಲು ನಿಖರ ಕಾರಣವೇನೆಂಬುವುದು ಪತ್ತೆಯಾಗಿಲ್ಲ. ಆದರೆ ಮೂರನೇ ವ್ಯಕ್ತಿ ಇರುವ ಬಗ್ಗೆ ಶಂಕೆ ಇನ್ನಷ್ಟು ಬಲವಾಗಿದೆ.
ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಮೊದಲು ಲಿಖಿತಾಶ್ರೀ ಮೇಲೆ ಮಚ್ಚಿನಿಂದ ಹಲ್ಲೆ‌ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿರಬಹುದು ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವ್ಯಕ್ತವಾಗಿದೆ. ಆದರೆ ಲಿಖಿತಾಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದೆ.

ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಕೋಲಾರ ಜಿಲ್ಲೆ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ದ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ನಿನ್ನೆ ಸಂಜೆ ವಧು ಲಿಖಿತಶ್ರೀ ಹಾಗೂ ವರ ನವೀನ್ ಅಂತ್ಯಸಂಸ್ಕಾರ ಮಾಡಲಾಗಿದೆ. ಕುಟುಂಬಸ್ಥರು ಬೈನೇಹಳ್ಳಿಯಲ್ಲಿ ಲಿಖಿತಶ್ರೀ ಹಾಗೂ ಚಂಬಾರಸನಹಳ್ಳಿ ಗ್ರಾಮದಲ್ಲಿ ನವೀನ್ ಅಂತ್ಯಸಂಸ್ಕಾರ ಮುಗಿಸಿದ್ದಾರೆ.

ಆಂಡರ್ಸನ್ ಪೇಟೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ. ಶುಕ್ರವಾರ ಪೊಲೀಸರು ನವೀನ್, ಲಿಖಿತಾಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಲಿದ್ದಾರೆ. ಇಬ್ಬರ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.

ಘಟನೆಗೂ ಮುನ್ನ ಇಬ್ಬರು ಯಾರ ಜತೆಗಾದರೂ ಫೋನ್ನಲ್ಲಿ ಮಾತನಾಡಿದ್ದರಾ ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮದುವೆಗೂ ಮೊದಲು ಎರಡೂ ಕುಟುಂಬದ ನಡುವೆ ದ್ವೇಷವಿತ್ತಾ? ನವೀನ್ ಮಾನಸಿಕ ಸ್ಥಿತಿ ಹೇಗಿತ್ತು ಎಂಬುದನ್ನು ತಿಳಿಯಲು ಪೊಲೀಸರು ನವೀನ್ ಸ್ನೇಹಿತರು ಹಾಗೂ ಆಪ್ತರ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಸಂಬಂಧ: ವ್ಯಕ್ತಿಯ ಬೆರಳು‌ಗಳನ್ನು ಕಟ್ ಮಾಡಿದ್ರು, ಮೂಳೆ ಮುರಿದರು, ಕಣ್ಣು ಕಿತ್ತರು, ಮರ್ಮಾಂಗ ಕತ್ತರಿಸಿ ಕೊಂದರು…

Paris Olympics 2024 ಜಾವೆಲಿನ್ ಥ್ರೋ: ‘ಚಿನ್ನದ ಹುಡುಗ’ ನೀರಜ್‌ ಚೋಪ್ರಾಗೆ ಬೆಳ್ಳಿ, ಭಾರತಕ್ಕೆ ಮೊದಲ ‘ರಜತ’ ಸಂಭ್ರಮ

ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…

ಮದುವೆ ದಿನವೇ ದಂಪತಿ ಹೊಡೆದಾಟ: ಪತ್ನಿ ಜತೆ ಪತಿಯೂ ಸಾವು

TAGGED:postmortem revealed more informationStill unsolved mystery of Kolar new couple's death
Share This Article
Facebook Twitter Copy Link Print
Previous Article ದಪ್ಪ ಹೊಟ್ಟೆಯಿಂದಾಗಿ ಕೂರೋಕೆ ಆಗ್ತಿಲ್ವಾ? ಈ ರೀತಿ ಮಾಡಿ!
Next Article ದಿನ ಭವಿಷ್ಯ 09-08-2024 ಶುಕ್ರವಾರ, ಇಂದಿನ ರಾಶಿ ಭವಿಷ್ಯದಲ್ಲೇನಿದೆ? ನಿಮ್ಮ ಅದೃಷ್ಟ ಸಂಖ್ಯೆ ಯಾವುದು?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?