newsics.com
ನವದೆಹಲಿ: ದೇವಸ್ಥಾನದ ಅರ್ಚಕರೊಬ್ಬರು ಆ ದೇವಸ್ಥಾನದಲ್ಲಿ ಕೆಲಸಕ್ಕೆ ಬರುತ್ತಿದ್ದ ಬಾಲಕನ ಬಳಿ ತನ್ನ ಖಾಸಗಿ ಅಂಗಗಳನ್ನು ಮುಟ್ಟುವಂತೆ ಒತ್ತಾಯಿಸಿ, ಲೈಂಗಿಕವಾಗಿ ಬಳಸಿಕೊಂಡ ಘಟನೆ ದೆಹಲಿಯಲ್ಲಿ
ನಡೆದಿದೆ. ಆ ಅರ್ಚಕನಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ 2016ರಲ್ಲಿ ಈ ಘಟನೆ ನಡೆದಿದೆ. ಬಾಲಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಕ್ಕೆ ಅವರಿಗೆ 15 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೇವಸ್ಥಾನದಲ್ಲಿ ಸಾಮಾನ್ಯ ಸ್ವಯಂಸೇವಕನಾಗಿ ಕೆಲಸ ಮಾಡುತ್ತಿದ್ದ 15 ವರ್ಷದ ಯುವಕನನ್ನು ಅರ್ಚಕ ಲೈಂಗಿಕವಾಗಿ ಶೋಷಿಸಿದ ಕಾರಣ ಅಪರಾಧದ ಗಂಭೀರತೆ ಉಲ್ಬಣಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.