Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

ಡಿಕೆಶಿ ಆದಾಯ ಮೀರಿದ ಅಕ್ರಮ ಆಸ್ತಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Share
1 Min Read
SHARE

newsics.com
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ಗೆ ಕೋರ್ಟ್ ಏನು ತೀರ್ಪು ಕೊಡುತ್ತೆ ಎನ್ನುವ ಅತಂಕ ಶುರುವಾಗಿದೆ.
2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್‌ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮಧ್ಯೆ, ಕಾಂಗ್ರೆಸ್‌ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಮೇಲ್ಮನವಿ ಹಿಂಪಡೆದಿದ್ದರು. ಹಾಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು.

ಇದಕ್ಕೆ ಆಕ್ಷೇಪಿಸಿ, ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಕೂಡ ಸರಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನ ಮೊರೆ ಹೋಗಿದೆ.

2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ

ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!

ನಿತ್ಯ ಬಾಳೆಹಣ್ಣು ತಿನ್ನಿ, ಬೆಡ್‌ರೂಮ್‌ನಲ್ಲಿ ಫುಲ್ ಖುಷಿಯಾಗಿರಿ!

TAGGED:Illegal assets beyond DK's income: High Court reserves judgement
Share This Article
Facebook Twitter Copy Link Print
Previous Article 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸಲಿದೆ ಗಜಪಡೆ
Next Article ಮಹಿಳೆಯರು ಅಂದ್ರೆ ದ್ವೇಷ; ಸೀರಿಯಲ್ ಕಿಲ್ಲರ್ ಆಗಿ 9 ಸ್ತ್ರೀಯರ ಹತ್ಯೆ!

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?