newsics.com
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದ 76 ವರ್ಷದ ಹಸೀನಾ ವಿರುದ್ಧ ಮೊಟ್ಟಮೊದಲ ಬಾರಿಗೆ ಪ್ರಕರಣ ದಾಖಲಾಗಿದೆ.
ಮೊಹಮ್ಮದ್‌ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು. ಅವರ ಹಿತೈಷಿ ಈ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.