newsics.com
ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಈ ಮೂಲಕ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ಚುನಾವಣಾ ಪ್ರಕ್ರಿಯೆ ಆರಂಭಿಸಲಿದೆ.
ಉಸ್ತುವಾರಿಗಳ ಪಟ್ಟಿ
- ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ: ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್.
- ಬೀದರ್, ಕಲಬುರಗಿ ನಗರ, ಕಲಬುರಗಿ ಗ್ರಾಮಾಂತರ ಮತ್ತು ಯಾದಗಿರಿಗೆ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ
- ಮೈಸೂರು, ಚಾಮರಾಜನಗರ ಮತ್ತು ಹಾಸನಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ
- ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಾಜಿ ಎಂಎಲ್ಸಿ ಕ್ಯಾ. ಗಣೇಶ್ ಕಾರ್ಣಿಕ್.
- ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ಮಧುಗಿರಿಗೆ ಎಂಎಲ್ಸಿ ಎನ್. ರವಿಕುಮಾರ್
- ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಮತ್ತು ವಿಜಯಪುರಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ
- ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡಕ್ಕೆ ಶಾಸಕ ಚನ್ನಬಸಪ್ಪ ಅವರನ್ನು ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ
ರಾಜ್ಯದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಮೀಸಲು ವರ್ಗೀಕರಣದ ಅಧಿಸೂಚನೆ ಪ್ರಕಟಿಸಿತ್ತು.