newsics.com
ದೇವರ’ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ದಕ್ಷಿಣ ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿಆರ್ ಗಾಯಗೊಂಡಿದ್ದಾರೆ. ಕೆಲ ದಿನಗಳ ಹಿಂದೆ ಜಿಮ್‌ನಲ್ಲಿದ್ದ ಸಂದರ್ಭದಲ್ಲಿ ಎಡಗೈ ಮಣಿಕಟ್ಟು ಸಣ್ಣ ಮಟ್ಟದಲ್ಲಿ ಉಳುಕಿದೆ. ಮುಂಜಾಗ್ರತಾ ಕ್ರಮವಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಗಾಯದ ನಡುವೆಯೂ ಜೂ.ಎನ್ ಟಿ ಆರ್ ನಿನ್ನೆ ರಾತ್ರಿ ‘ದೇವರ’ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ನಟ ಶೀಘ್ರದಲ್ಲೇ ಕೆಲಸಕ್ಕೆ ಮರಳಲಿದ್ದಾರೆ ಎಂದು ಜೂ.ಎನ್‌ಟಿಆರ್ ಅವರ ಕಚೇರಿಯಿಂದ ಹೇಳಿಕೆ ಹೊರಡಿಸಲಾಗಿದೆ.
ಟಾಲಿವುಡ್ ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟನನ್ನು ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಯಂಗ್ ಟೈಗರ್ ಅಂತಾ ಕರೆಯೋದುಂಟು. ಆರ್‌ಆರ್‌ಆರ್ ಮೂಲಕ ವಿಶ್ವದಾದ್ಯಂತದ ಸಿನಿಪ್ರಿಯರ ಗಮನ ಸೆಳೆದಿರುವ ಇವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಆದ್ರೆ ಇತ್ತೀಚೆಗೆ ಗಾಯಗೊಂಡಿದ್ದಾರೆ ಎಂಬ ಸುದ್ದಿ ಅವರ ತಂಡದಿಂದ ಬಂದಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.