newsics.com
ನವದೆಹಲಿ/ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್) ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ.
ಈಗಾಗಲೇ ಕರ್ನಾಟಕದ ನಂದಿನಿ ಹಾಲು ದೇಶದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಉತ್ತಮ ಸ್ಥಾನವನ್ನು ಹೊಂದಿದ್ದು, ನಮ್ಮ ರಾಜ್ಯ ಮಾತ್ರವಲ್ಲದೇ ನೆರೆ ಹೊರೆ ರಾಜ್ಯಗಳು, ದೇಶ ವಿದೇಶಗಳಲ್ಲಿಯೂ ಮಾರಾಟ ಆಗುತ್ತಿದೆ. ನಂದಿನಿ ಬ್ರ್ಯಾಂಡ್‌ನ ಟೆಟ್ರಾ ಪ್ಯಾಕ್ ಹಾಲನ್ನು ನಮ್ಮ ದೇಶದ ಸೈನಿಕರಿಗೂ ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ.
ದೆಹಲಿ ಸರ್ಕಾರದಿಂದ ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿಯಿಂದ ಮುಂದಿನ ತಿಂಗಳಿಂದ (2024ರ ಸೆಪ್ಟಂಬರ್ 1ರಿಂದ) ಪ್ರತಿದಿನ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಕಳುಹಿಸಲು ಸಮ್ಮತಿಯನ್ನು ನೀಡಿದೆ. ಈಗಾಗಲೇ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ನಂದಿನಿ ಹಾಲನ್ನು ಪೂರೈಕೆ ಮಾಡಲಾಗುತ್ತಿದೆ. ಈಗ ದೆಹಲಿ ಸರ್ಕಾರದಿಂದಲೂ ನಂದಿನಿ ಹಾಲಿಗೆ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಒಪ್ಪಿಕೊಂಡಿದೆ.
ಬಿಸಿಲಿನ ತಾಪ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವೇಳೆ ಕುಸಿದುಬಿದ್ದ ಮಕ್ಕಳು, ಪೊಲೀಸರು; ಆಸ್ಪತ್ರೆಗೆ ದಾಖಲು
ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!