newsics.com
ಚಿಕ್ಕಬಳ್ಳಾಪುರ/ ರಾಯಚೂರು: ಸ್ವಾತಂತ್ರ್ಯ ದಿನದ ಧ್ವಜಾರೋಹಣ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದುಬಿದ್ದ ಘಟನೆ ಚಿಕ್ಕಬಳ್ಳಾಪುರ ಹಾಗೂ ರಾಯಚೂರಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ನಗರದ ಸರ್. ಎಂ. ವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು ಕುಸಿದುಬಿದ್ದಿದ್ದಾರೆ.
ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದುಬಿದ್ದಿದ್ದಾರೆ. ತಕ್ಷಣ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ರಾಯಚೂರಿನಲ್ಲೂ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ.
ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.
ರಾಷ್ಟ್ರಧ್ವಜ ಹಾರಿಸಲು ಈ ಅಂಶಗಳನ್ನು ನೆನಪಿಡಿ, ಇಲ್ಲದಿದ್ರೆ ಜೈಲೂಟ ಗ್ಯಾರಂಟಿ!
ಬೋಲ್ಡ್ ಫೋಟೋಶೂಟ್, ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಹಾಟ್ ‘ಗೌರಿ’..!