newsics.com
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ, ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ.
ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕನ್ನಡದ ಕೆಜಿಎಫ್-2 ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2 ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.
ಇನ್ನು, ಮಲಯಾಳಂನ ‘ಆಟಂ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. ತಮಿಳಿನ ತಿರುಚಿತ್ರಾಂಬಲಂ ಚಿತ್ರದಲ್ಲಿ ಅಭಿನಯಿಸಿರುವ ನಿತ್ಯಾ ಮೆನನ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.